ಬೆಂಗಳೂರು: ಬಳ್ಳಾರಿ, ಉಡುಪಿ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ, ಹಾನಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.
ಕಳೆದ ಎಂಟು ದಿನಗಳಿಂದ ಕೊಡಗು, ಹಾಸನ, ಉಡುಪಿ, ಬಳ್ಳಾರಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲ್ಬುರ್ಗಿ, ಮೈಸೂರು, ಕೊಪ್ಪಳ, ಬೆಳಗಾವಿಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸುವಂತೆ ಸೂಚಿಸಿದರು.
ಹಾಗೆಯೇ ಪ್ರವಾಹ ತಡೆಗೆ ಅಗತ್ಯ ಉಪಕರಣಗಳನ್ನು ಖರೀದಿಸಲು ಅನುದಾನ ಬಿಡುಗಡೆ ಮಾಡಲಾಗುವುದು. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿರುವ ಮೊತ್ತವನ್ನು ಪ್ರವಾಹ ಪರಿಸ್ಥಿತಿ ನಿಭಾಯಿಸಲು ಬಳಕೆ ಮಾಡುವಂತೆ ಅವರು ತಿಳಿಸಿದರು. ಹಾಗೆಯೇ ನದಿ, ಭೂ ಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ತಂಡ ರಚಿಸುವಂತೆ ಸೂಚಿಸಿದರು. ಅಂತಹ ಪ್ರದೇಶದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ @BSYBJP ರವರು ಇಂದು ವೀಡಿಯೊ ಸಂವಾದ ನಡೆಸಿದರು. (1/3) pic.twitter.com/k7W8ULyAFj
— CM of Karnataka (@CMofKarnataka) July 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.