ನವದೆಹಲಿ: ಸಿಬಿಎಸ್ಇ (ಕೇಂದ್ರ ಪ್ರೌಢಶಿಕ್ಷಣ ಮಂಡಳಿ) ಯು ಖಾಸಗಿಯಾಗಿ ಪರೀಕ್ಷೆ ಬರೆಯುವ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 16 ರಿಂದ ಸೆಪ್ಟೆಂಬರ್ 15 ರೊಳಗಾಗಿ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿದೆ.
ಖಾಸಗಿ ಅಭ್ಯರ್ಥಿಗಳ ಈ ಹಿಂದಿನ ಮೌಲ್ಯಮಾಪನ ದಾಖಲೆಗಳು ಸಿಬಿಎಸ್ಇ ಬಳಿ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಅವರಿಗೆ ಪರ್ಯಾಯ ನೀತಿಯ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲು ಅಸಾಧ್ಯ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಈ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಮುಗಿದ ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಆ ಮೂಲಕ ಅವರಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಸಿಬಿಎಸ್ಇ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.