ಬೆಂಗಳೂರು: ರಾಜ್ಯದಲ್ಲಿ ಸ್ಥಿರಾಸ್ತಿ ಕ್ಷೇತ್ರದ ಪುನರುಜ್ಜೀವನಕ್ಕಾಗಿ ರಾಜ್ಯ ಸರ್ಕಾರ 35 – 45 ಲಕ್ಷ ರೂ. ಗಳ ಫ್ಲ್ಯಾಟ್ ನೋಂದಣಿಯ ಸ್ಟ್ಯಾಂಪ್ ಶುಲ್ಕವನ್ನು 5% ಗಳಿಂದ 3% ಗೆ ಇಳಿಕೆ ಮಾಡಿದೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಗೃಹ ಖರೀದಿಯ ಕನಸು ಹೊತ್ತವರ ಕನಸುಗಳನ್ನು ಸುಲಭವಾಗಿ ಈಡೇರಿಸಿಕೊಳ್ಳಲು ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ಮೊದಲ ಅಪಾರ್ಟ್ಮೆಂಟ್ ಖರೀದಿ ಮಾಡುವವರಿಗೆ ಈ ಸೌಲಭ್ಯ ಅನ್ವಯವಾಗಲಿದೆ. ಹಾಗೆಯೇ ಮಾರ್ಗಸೂಚಿ ದರವನ್ನು ಏರಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಮುಂದಿನ ಎರಡು ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬಡವರಿಗಾಗಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.