ನವದೆಹಲಿ: ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟ ದೇಶದ ಬೆಳ್ಳಿ ಬೆಡಗಿ ಮೀರಾಬಾಯ್ ಚಾನು ಅವರ ಸಾಧನೆಯನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ.
ತಮ್ಮ ಅದ್ಭುತ ಪ್ರದರ್ಶನದಿಂದ ಭಾರತಕ್ಕೆ ಉಲ್ಲಾಸವಾಗಿದೆ. ಭವ್ಯ ಕ್ರೀಡಾಕೂಟಕ್ಕೆ ಹರ್ಷದಾಯಕ ಆರಂಭವನ್ನು ನೀಡಿದ್ದೀರಿ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ವೇಯ್ಟ್ಲಿಫ್ಟಿಂಗ್ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟದ್ದಕ್ಕಾಗಿ ಮೀರಾಬಾಯ್ ಚಾನು ಅವರಿಗೆ ಅಭಿನಂದನೆಗಳು. ಅವರ ಈ ಯಶಸ್ಸು ದೇಶದ ಪ್ರತಿಯೊಬ್ಬರಿಗೂ ಪ್ರೇರಣೆ. ಚಿಯರ್ ಫಾರ್ ಇಂಡಿಯಾ ಎಂದು ಪ್ರಧಾನಿ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.
Could not have asked for a happier start to @Tokyo2020! India is elated by @mirabai_chanu’s stupendous performance. Congratulations to her for winning the Silver medal in weightlifting. Her success motivates every Indian. #Cheer4India #Tokyo2020 pic.twitter.com/B6uJtDlaJo
— Narendra Modi (@narendramodi) July 24, 2021
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೂ ಮೀರಾಬಾಯ್ ಚಾನು ಅವರನ್ನು ಅಭಿನಂದಿಸಿದ್ದು, ಟೊಕಿಯೋ ಒಲಿಂಪಿಕ್ಸ್ 2020 ರಲ್ಲಿ ವೇಯ್ಟ್ಲಿಫ್ಟಿಂಗ್ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯ್ ಚಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.
Heartiest congratulations to Mirabai Chanu for starting the medal tally for India in the Tokyo Olympics 2020 by winning silver medal in weightlifting.
— President of India (@rashtrapatibhvn) July 24, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.