ಬೆಂಗಳೂರು: ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆಗಾಗಿ ರೈಲ್ವೆ ಪೊಲೀಸರು ಹೊಸ ವ್ಯವಸ್ಥೆ ಒಂದನ್ನು ಜಾರಿಗೊಳಿಸಿದ್ದಾರೆ.
ರಾಜ್ಯದ ರೈಲು ನಿಲ್ದಾಣಗಳಲ್ಲಿ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು, ಪ್ರಯಾಣಿಕರ ಜೊತೆಗೆ ನಿರಂತರ ಸಂಪರ್ಕ ಸಾಧಿಸಲು ಈ ವಿನೂತನ ಕ್ರಮಕ್ಕೆ ಮುಂದಾಗಿದ್ದಾರೆ. ಇಲಾಖೆಯ ಸಿಬ್ಬಂದಿಗಳ ವಿಸಿಟಿಂಗ್ ಕಾರ್ಡ್ಗಳನ್ನು ವಿತರಣೆ ಮಾಡುವ ಮೂಲಕ, ಅಪರಾಧ ಪ್ರಕರಣಗಳನ್ನು ತಕ್ಷಣದಲ್ಲೇ ಪೊಲೀಸರ ಗಮನಕ್ಕೆ ತರುವಂತೆ ಮಾಡುತ್ತಿದ್ದಾರೆ. ಆ ಮೂಲಕ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.
ರೈಲ್ವೆ ಇಲಾಖೆಯ ಎಜಿಡಿಪಿ ಭಾಸ್ಕರ್ ರಾವ್ ನೇತೃತ್ವದಲ್ಲಿ, ಎಸ್ಪಿ ಸಿರಿ ಗೌರಿ ಅವರು ಈ ವಿಸಿಟಿಂಗ್ ಕಾರ್ಡ್ ಯೋಜನೆಯನ್ನು ಪ್ರಾಯೋಗಿಕವಾಗಿ ಬೆಂಗಳೂರು, ಯಶವಂತಪುರ, ಕಂಟೋನ್ಮೆಂಟ್ ರೈಲ್ವೆಯ ಕೆಲ ಪೊಲೀಸರಿಗೆ ತಮ್ಮ ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತೆ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ ಪೋಲೀಸರು ಹ್ಯಾಪಿ ಟು ಹೆಲ್ಪ್ ಶೀರ್ಷಿಕೆ ಜೊತೆಗೆ ಪ್ರಯಾಣಿಕರಿಗೆ ತಮ್ಮ ವಿಸಿಟಿಂಗ್ ಕಾರ್ಡ್ಗಳನ್ನು ಹಂಚುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.