ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಓರ್ವ ಉಗ್ರನ ಸಂಹಾರವಾಗಿದೆ.
ರಾಜ್ಯದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಓರ್ವ ಉಗ್ರನನ್ನು ಎನ್ಕೌಂಟರ್ ಮೂಲಕ ಹೊಡೆದುರುಳಿಸಲಾಗಿದೆ ಎಂದು ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಂನ ಮುನಾಂದ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಈ ದಾಳಿ ನಡೆಸಿವೆ. ಈ ಸಂದರ್ಭದಲ್ಲಿ ಓರ್ವ ಉಗ್ರನ ಸಂಹಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಸಹ ರಾಜ್ಯದಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಹೊಡೆದುರುಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.