ಬೆಂಗಳೂರು: ಹೈಕಮಾಂಡ್ ಭೇಟಿಗೆ ಸಂಬಂಧಿಸಿದಂತೆ ನವದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕೇಂದ್ರ ವಿತ್ತ ಸಿಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಕಳೆದ ವರ್ಷದ ರಾಜ್ಯದ ಜಿಎಸ್ಟಿ ಪರಿಹಾರ ಮೊತ್ತ 11,400 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ. ಅದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ಅವರು ಕಂತುಗಳ ರೂಪದಲ್ಲಿ ಪ್ರತಿ ತಿಂಗಳು ಬಿಡುಗಡೆ ಮಾಡುವ ಭರವಸೆ ನೀಡಿರುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. 18 ಸಾವಿರ ಕೋಟಿ ಸಾಲ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ @BSBommai ರವರು ಇಂದು ಕೇಂದ್ರ ಹಣಕಾಸು ಸಚಿವೆ @nsitharaman ರವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ #GST ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.@FinMinIndia pic.twitter.com/PJ06EgRIGk
— CM of Karnataka (@CMofKarnataka) July 31, 2021
ಹಾಗೆಯೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಜೊತೆಗೆ ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ. ಮುಂದಿನ ತಿಂಗಳಿನಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ 1.5 ಲಕ್ಷ ಕೊರೋನಾ ಲಸಿಕೆ ಪೂರೈಕೆ ಮಾಡುವುದಾಗಿ ಅವರು ತಿಳಿಸಿರುವುದಾಗಿ ಹೇಳಿದ್ದಾರೆ.
During his two-day visit to New Delhi, Chief Minister @BSBommai met Union Health & Family Welfare and Chemicals & Fertilizers Minister Shri @mansukhmandviya today and discussed about various aspects of Covid management including supply of vaccines & essential drugs.@MoHFW_INDIA pic.twitter.com/05UbaKCoKu
— CM of Karnataka (@CMofKarnataka) July 31, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.