
ನವದೆಹಲಿ: ಆಗಸ್ಟ್ 9 ರಂದು ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸುವ ಸಾಧ್ಯತೆ ಇದೆ ಎಂದು ಯುನೈಟೆಡ್ ನೇಶನ್ ಸೆಕ್ಯುರಿಟಿ ಕೌನ್ಸಿಲ್ನ ಶಾಶ್ವತ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇದೇ ಮೊದಲ ಬಾರಿಗೆ ಎಂಬಂತೆ ಭಾರತದ ಪ್ರಧಾನಿಯೋರ್ವರು ವಹಿಸಿಕೊಳ್ಳುತ್ತಿದ್ದಾರೆ. ಇದು ದೇಶದ ನಾಯಕತ್ವ ಗಟ್ಟಿಯಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸಭೆಯಲ್ಲಿ ಭಾರತ ಕರಾವಳಿ ಭದ್ರತೆ, ಭಯೋತ್ಪಾದನೆ ನಿಗ್ರಹ, ಶಾಂತಿ ಪಾಲನೆ ಎಂಬ ಮೂರು ಮುಖ್ಯ ವಿಚಾರಗಳಿಗೆ ಸಂಬಂಧಿಸಿದಂತೆ ತನ್ನ ನಿಲುವು ಮಂಡಿಸಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಮೊದಲಾದವರು ಭಾಗವಹಿಸಲಿದ್ದಾರೆ.
A first in the making…
With India as President of @UN Security Council in August, an Indian Prime Minister may perhaps preside, albeit virtually, a Council meeting for 1st time on 9 August 2021.
Pic: From last visit of PM Shri @narendramodi to UN in 2019. pic.twitter.com/OxaZbKZsNq
— Syed Akbaruddin (@AkbaruddinIndia) August 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


