ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರನ ಸಂಹಾರವಾಗಿದೆ.
ಬಂಡಿಪೋರಾದ ಚಂದಾಜೆ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿವೆ. ಈ ಸಂದರ್ಭದಲ್ಲಿ ಸೇನಾಪಡೆಯ ಮೇಲೆ ಅವಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾರೆ. ಕೂಡಲೇ ಪ್ರದೇಶವನ್ನು ಸುತ್ತುವರಿದ ಭದ್ರತಾ ಪಡೆಗಳು ಎನ್ಕೌಂಟರ್ ದಾಳಿ ನಡೆಸಿವೆ.
ಈ ದಾಳಿಯಲ್ಲಿ ಓರ್ವ ಉಗ್ರನ ವಧೆಯಾಗಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಸಂದೇಹವಿದ್ದು, ಈ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.