ಮಂಗಳೂರು: ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಏರಿಕೆಯಾಗುವ ಸಂಭವ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಇರುವ ದೇಗುಲಗಳಲ್ಲಿ ಸೇವೆಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಕೊರೋನಾ ಸ್ಥಿತಿಗತಿಗಳನ್ನು ಅವಲೋಕಿಸಿ ಜಿಲ್ಲೆಯ ಪ್ರಸಿದ್ಧ ದೇಗುಲಗಳಾದ ಕುಕ್ಕೆ ಸುಬ್ರಹ್ಮಣ್ಯ ದೇಗುಲ, ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ, ಧರ್ಮಸ್ಥಳಗಳಲ್ಲಿ ನೂತನ ನಿರ್ಬಂಧ ಹೇರಲಾಗಿದೆ. ಈ ದೇಗುಲಗಳಿಗೆ ಹೊರ ರಾಜ್ಯಗಳಿಂದ, ಹೊರ ಜಿಲ್ಲೆಗಳಿಂದ ಭಕ್ತರು ಆಗಮಿಸುವುದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಂಡಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.
5 ಆಗಸ್ಟ್ 2022 ರಿಂದ 15 ಆಗಸ್ಟ್ 2021 ರ ವರೆಗೆ ಕಟೀಲು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಗಳು ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಮಾತ್ರವೇ ತೆರೆದಿರಲಿದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಕೊರೋನಾ ನಿಯಂತ್ರಣ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮೊದಲಾದವುಗಳನ್ನು ಅನುಸರಿಸಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ತೀರ್ಥಪ್ರಸಾದ, ಸೇವೆಗಳು, ಅನ್ನ ಸಂತರ್ಪಣೆ ಇರುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಶನಿವಾರ – ಭಾನುವಾರ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂದು ಆದೇಶ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.