ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಆಗಸ್ಟ್ 15 ರ ಬಳಿಕ ‘ವೈದ್ಯರ ನಡೆ, ಸೋಂಕಿತರ ಮನೆ ಕಡೆ’ ಎಂಬ ವಿನೂತನ ಕ್ರಮ ಜಾರಿಗೆ ತರಲು ಬಿಬಿಎಂಪಿ ಯೋಜನೆ ರೂಪಿಸಿದೆ.
ನಗರದಲ್ಲಿ ಸೋಂಕು ಆರಂಭದ ಹಂತದಲ್ಲಿಯೇ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿ ಇಂತಹ ಒಂದು ಮಹತ್ವದ ನಿರ್ಣಯ ಕೈಗೊಂಡಿದೆ. ಈ ಯೋಜನೆಯಂತೆ ಆಗಸ್ಟ್ 16 ರಿಂದ ತೊಡಗಿದಂತೆ ಪಾಲಿಕೆಯ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಮನೆಗೂ ವೈದ್ಯರು, ಸಿಬ್ಬಂದಿ ತೆರಳಿ ಪರೀಕ್ಷೆ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ 108 ತಂಡಗಳನ್ನು ರಚನೆ ಮಾಡಲಿದ್ದು, ಈ ತಂಡಗಳು ಮನೆ ಮನೆಗೆ ತೆರಳಿ ಎಲ್ಲಾ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಿದೆ. ಹೆಚ್ಚು ಸೋಂಕಿತರಿರುವಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚುವರಿ ವೈದ್ಯರ ನೇಮಕ ಮಾಡಲಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.