ನವದೆಹಲಿ: ಭಾರತ ಪ್ರವಾಸದಲ್ಲಿರುವ ಸಾರ್ಕ್ ಸೆಕ್ರೆಟರಿ ಜನರಲ್ ಎಸಲಾ ರುವಾನ್ ವೀರ್ಕೂನ್ ಅವರು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಭೇಟಿಯಾಗಿದ್ದಾರೆ.
ಕೊರೋನಾ ನಿರ್ವಹಣೆಯಲ್ಲಿ ಪ್ರಾದೇಶಿಕ ಸಹಕಾರ ವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆಯನ್ನು ಉಭಯ ನಾಯಕರು ನಡೆಸಿದ್ದಾರೆ. ಈ ಸಂಬಂಧ ಜೈಶಂಕರ್ ಅವರು ಟ್ವೀಟ್ ಮಾಡಿದ್ದು, ಸಾರ್ಕ್ ಒಕ್ಕೂಟದ 14 ನೇ ಪ್ರಧಾನ ಕಾರ್ಯದರ್ಶಿ ಇ ಆರ್ ವೀರ್ಕೂನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ ಎಂದು ಹೇಳಿದ್ದಾರೆ.
ಜೈಶಂಕರ್ ಅವರನ್ನು ಭೇಟಿ ಮಾಡುವುದಕ್ಕೂ ಮೊದಲು ವೀರ್ಕೂನ್ ಅವರು, ಕೇಂದ್ರ ಸಚಿವ ರಾಜ್ಕುಮಾರ್ ರಂಜನ್ ಸಿಂಗ್ ಅವರನ್ನು ಭೇಟಿ ಮಾಡಿದರು. ಸಾರ್ಕ್ ಒಕ್ಕೂಟ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಬೂತಾನ್, ಮಾಲ್ಡಿವ್ಸ್, ನೇಪಾಳ, ಶ್ರೀಲಂಕಾ, ಭಾರತವನ್ನು ಒಳಗೊಂಡ ಪ್ರಾದೇಶಿಕ ರಾಷ್ಟ್ರಗಳ ಒಕ್ಕೂಟವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.