ಬೆಂಗಳೂರು: ನಗರದಲ್ಲಿ ಕೊರೋನಾ ನೈಟ್ ಕರ್ಫ್ಯೂವನ್ನು ಆಗಸ್ಟ್ 30 ರ ವರೆಗೆ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ.
ಆಗಸ್ಟ್ 30 ರ ವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಸಂಭಾವ್ಯ ಕೊರೋನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.
ಹಾಗೆಯೇ ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ನಗರದಲ್ಲಿ ಹೆಚ್ಚು ಹೆಚ್ಚು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಕೊರೋನಾ ಪರೀಕ್ಷಾ ಪ್ರಮಾಣವನ್ನು 50% ಹೆಚ್ಚಿಸಲಾಗುತ್ತದೆ ಎಂದು ಬಿಬಿಎಂಪಿ ಸಹ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.