ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಇನ್ನಿತರ ಸಾಧಕರಿಗೆ ಪ್ರಶಸ್ತಿ ಪ್ರಧಾನಿಸಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸುನಿಲ್ ಕುಮಾರ್ ಅವರು ಗಣ್ಯರಿಗೆ ಪ್ರಶಸ್ತಿ ಪ್ರದಾನಿಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಬಿ. ಜಿ. ಉದಯ್, ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರು, ಸಂಗೀತ ಕಲಾವಿದ ನರಸಿಂಹಲು ವಡವಾಟಿ ಸೇರಿದಂತೆ ಪ್ರಶಸ್ತಿ ಪುರಸ್ಕೃತ ಸಾಧಕರು, ಇಲಾಖೆ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕ ಕೆ.ಎಸ್.ರಂಗಪ್ಪ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಕನ್ನಡ, ಸಂಸ್ಕೃತಿ ಸಚಿವ @karkalasunil, ಶಾಸಕ @BGUdayBJP, ಭಾಲ್ಕಿ ಹಿರೇಮಠದ ಡಾ||ಬಸವಲಿಂಗ ಪಟ್ಟದೇವರು, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಸಂಗೀತ ಕಲಾವಿದ ನರಸಿಂಹಲು ವಡವಾಟಿ ಸೇರಿದಂತೆ ಪ್ರಶಸ್ತಿ ಪುರಸ್ಕೃತ ಸಾಧಕರು, ಇಲಾಖೆ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕ KS ರಂಗಪ್ಪ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.(2/2) pic.twitter.com/5nXOiaxA3H
— CM of Karnataka (@CMofKarnataka) August 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.