ಬೆಂಗಳೂರು: ಸೆ. 15 ರೊಳಗಾಗಿ ದಂಡ ರಹಿತವಾಗಿ ಪಾವತಿ ಮಾಡಬೇಕಿದ್ದ ರಸ್ತೆ ತೆರಿಗೆಯ ಅವಧಿಯನ್ನು ಅ. 15 ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಸ್ತೆ ತೆರಿಗೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡುವಂತೆ ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳು ಮನವಿ ಮಾಡಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಉದ್ದಿಮೆಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದು, ಈ ನಿಟ್ಟಿನಲ್ಲಿ ತೆರಿಗೆ ಪಾವತಿಗೆ ಮತ್ತಷ್ಟು ಕಾಲಾವಕಾಶ ಕೋರಿದ್ದರು ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ರಸ್ತೆ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಿದ್ದು, ಆಗಸ್ಟ್ 15 ರೊಳಗಾಗಿ ದಂಡ ರಹಿತವಾಗಿ ಪಾವತಿ ಮಾಡಬೇಕಿದ್ದ ತೆರಿಗೆ ಪಾವತಿ ಅವಧಿಯನ್ನು, ಸೆಪ್ಟೆಂಬರ್ 15 ರ ವರೆಗೆ ಮತ್ತು ಸೆಪ್ಟೆಂಬರ್ 15 ರೊಳಗಾಗಿ ಪಾವತಿಸಬೇಕಿದ್ದ ತೆರಿಗೆಯನ್ನು ಅಕ್ಟೋಬರ್ 15 ರ ವರೆಗೆ ದಂಡರಹಿತವಾಗಿ ಪಾವತಿಸಲು ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ. ಇದರಿಂದ ಸುಮಾರು 40 ಸಾವಿರ ಬಸ್ ಮಾಲೀಕರಿಗೆ ಅನುಕೂಲವಾಗಲಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.
ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳು ನನ್ನನು ಭೇಟಿ ಮಾಡಿ ಕೋವಿಡ್ ಹಿನ್ನಲೆಯಲ್ಲಿ ಉದ್ದಿಮೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ರಸ್ತೆ ತೆರಿಗೆ ಪಾವತಿ ದಿನಾಂಕವನ್ನು ಮುಂದೂಡಲು ಮನವಿ ಮಾಡಿದ್ದರು. 1/2
— B Sriramulu (@sriramulubjp) August 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.