ಛತ್ತೀಸ್ಘಢ: ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಇಬ್ಬರು ನಕ್ಸಲರು ಸಂಹರಿಸಲ್ಪಟ್ಟಿದ್ದಾರೆ.
ಈ ಸಂಬಂಧ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶರ್ಮಾ ಅವರು ಮಾಹಿತಿ ನೀಡಿದ್ದು, ಕನ್ಹೈಗುಡ ಪ್ರದೇಶದಲ್ಲಿ ನಕ್ಸಲ್ ವಿರುದ್ಧ ಕಾರ್ಯಾಚರಣೆ ನಡೆದಿದೆ. ಗ್ರಾಮದ ಗೊಂಪಾಡ್ ಸಮೀಪದ ಅರಣ್ಯ ಪ್ರದೇಶದಲ್ಲಿ ನಕ್ಸಲ್ರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಈ ಮಾಹಿತಿಯ ಮೇರೆಗೆ ಡಿಆರ್ಜಿ, ಸಿಆರ್ಪಿಎಫ್ ಮತ್ತು ಕೋಬ್ರಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ನಕ್ಸಲರ ವಧೆಯಾಗಿದೆ. ಹಲವು ಮಂದಿ ನಕ್ಸಲರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತ ನಕ್ಸಲರ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಕಾರ್ಯಾಚರಣೆ ನಡೆಸಲಾದ ಪ್ರದೇಶದಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಪೋಟಕಗಳನ್ನು ವಶಕ್ಕೆ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.