ಬೆಂಗಳೂರು: ರಾಜ್ಯದ ರೈತರ ಆದಾಯವನ್ನು 2023 – 24 ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ವರದಿ ತಯಾರಿಸಲು ರೈತರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ರೈತರಿಗೆ ಅನುಕೂಲವಾಗುವಂತೆ ಕಲ್ಯಾಣ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಜೊತೆಗೆ ಕೆಲಸ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅವಧಿ ನಿಗದಿಗೊಳಿಸಿ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಬೀಜ, ರಸಗೊಬ್ಬರ ನಿರ್ವಹಣೆ ಮಾಡಿ ಭೂಮಿಯ ಫಲವತ್ತತೆ ಸುಧಾರಿಸುವ ಸಲುವಾಗಿಯೂ ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.
ಜೊತೆಗೆ ಇದರಲ್ಲಿ ಕೃಷಿ, ಹೈನುಗಾರಿಕೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಹೀಗೆ ಎಲ್ಲಾ ಕೃಷಿ ಸಂಬಂಧಿ ಚಟುವಟಿಕೆಗಳು, ಕೃಷಿ ಉತ್ಪನ್ನಗಳ ಮೌಲ್ಯ ವೃದ್ಧಿಸುವುದು, ಅವುಗಳ ಉತ್ತಮ ಸಂಸ್ಕರಣೆಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.