ನವದೆಹಲಿ: ದೇಶದ ಅಸಂಘಟಿತ ವಲಯದ ಕಾರ್ಮಿಕರ ಡೆಟಾಬೇಸ್ ನಿರ್ವಹಣೆಗೆ ಇ-ಶ್ರಮ್ ಪೋರ್ಟಲ್ ಅನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲಿದೆ.
ಆ. 24 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರು ಇ- ಶ್ರಮ್ ಪೋರ್ಟಲ್ಗಾಗಿ ಲಾಂಛನ ಅನಾವರಣ ಮಾಡಿದ್ದರು.
ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಈ ಪೋರ್ಟಲ್ ಒಂದು ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರ ನಿರ್ಮಾಣದ ಶ್ರಮ ಯೋಗಿಗಳಿಗಾಗಿ ಈ ರಾಷ್ಟ್ರೀಯ ಡೆಟಾಬೇಸ್ ಪೋರ್ಟಲ್ ಆರಂಭಿಸಲಾಗುತ್ತಿದೆ. ಕಾರ್ಮಿಕ ವರ್ಗದ ಅಭ್ಯುದಯಕ್ಕಾಗಿ ಜಾರಿಗೊಳಿಸಿದ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಕಾರ್ಮಿಕ ಸಚಿವರು ಮಾತನಾಡಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೆಟಾಬೇಸ್ ಇ – ಶ್ರಮ್ ಪೋರ್ಟಲ್ ಅನ್ನು ಆರಂಭಿಸುತ್ತಿದ್ದು, ಇದು ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಲಕ್ಷಾಂತರ ಮಂದಿ ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಇದು ಪೂರಕವಾಗಿರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.