ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಲಸಿಕಾ ಅಭಿಯಾನದಲ್ಲಿ ಕರ್ನಾಟಕ 4 ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಮಹತ್ವದ ಗುರಿ ಸಾಧಿಸಿದೆ.
ಕೆಲ ದಿನಗಳ ಹಿಂದಷ್ಟೇ ಕೇವಲ ಬೆಂಗಳೂರು ನಗರಕ್ಕೆ ಮಾತ್ರವೇ ಸಂಬಂಧಿಸಿದಂತೆ 1 ಕೋಟಿ ಲಸಿಕೆ ನೀಡುವ ಮೂಲಕ ಕರ್ನಾಟ ದಾಖಲೆ ಬರೆದಿತ್ತು. ಇದೀಗ ಇಡೀ ರಾಜ್ಯಕ್ಕೆ ಸಂಬಂಧಿಸಿದಂತೆ 4 ಕೋಟಿ ಡೋಸ್ ಲಸಿಕೆಗಳನ್ನು ಕರ್ನಾಟಕದಲ್ಲಿ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.
ಈ ಸಂಬಂಧ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದು, ಭಾರತವು ಒಂದೇ ದಿನದಲ್ಲಿ 1 ಕೋಟಿ ಡೋಸ್ ಲಸಿಕೆ ವಿತರಿಸಿದಂದು, ಕರ್ನಾಟಕವು ಈವರೆಗೆ ವಿತರಿಸಿದ ಲಸಿಕೆಯ ಪ್ರಮಾಣ 4 ಕೋಟಿಗಿಂತ ಅಧಿಕವಾಗಿದೆ ಎಂದು ತಿಳಿಸಿದ್ದಾರೆ.
4️⃣ CRORES!
Karnataka crosses 4 crore doses on a day India crossed 1 crore doses! #COVID19 @CMofKarnataka
— Dr Sudhakar K (@mla_sudhakar) August 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.