ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳ ನೇಮಕಾತಿಯಲ್ಲಿ 2% ಗಳಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಸಚಿವ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ.
ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಕ್ರೀಡಾ ಕೋಟಾದಡಿ 2% ಗಳಷ್ಟು ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ. ಅದರಂತೆಯೇ ಎಲ್ಲಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಹಾಗೆಯೇ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೂ ಬಾಲಕಿಯರ ಕ್ರೀಡಾ ವಸತಿ ನಿಲಯಗಳನ್ನು ಆರಂಭಿಸಲಾಗುವುದು. ಮುಂದಿನ ಒಲಿಂಪಿಕ್ಗೆ ಅಮೃತ ಕ್ರೀಡಾ ದತ್ತು ಯೋಜನೆಯಡಿ 75 ಕ್ರೀಡಾಪಟುಗಳನ್ನು ತರಬೇತಿಗಾಗಿ ಆಯ್ಕೆ ಮಾಡಲಿದ್ದೇವೆ. ಎಲ್ಲರಿಗೂ ವಿಶ್ವಮಟ್ಟದ ತರಬೇತಿ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.