ನವದೆಹಲಿ: 2000 22ರಲ್ಲಿ ಉತ್ತರಾಖಂಡ ರಾಜ್ಯದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಇಂದಿನಿಂದಲೇ ಅಲ್ಲಿ ತನ್ನ ಪ್ರಚಾರ ಕಾರ್ಯವನ್ನು ಆರಂಭಿಸಲಿದೆ.
ಕೇಂದ್ರ ಸಚಿವರಾದ ಅಜಯ್ ಭಟ್ ಅವರು ಶ್ರೀನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ‘ಜನಾಶೀರ್ವಾದ ಯಾತ್ರೆ’ಯ ಎರಡನೇ ಹಂತಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಉತ್ತರಾಖಂಡದ ಬಿಜೆಪಿ ರಾಜ್ಯಾಧ್ಯಕ್ಷ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿರುವ ಉತ್ತರಖಂಡದ ಬಿಜೆಪಿ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ಅವರು, “ಶುಕ್ರವಾರ ಯಾತ್ರೆ ಆರಂಭವಾಗಲಿದೆ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ನಡೆದ ಸಮಗ್ರ ಅಭಿವೃದ್ಧಿಯ ಬಗ್ಗೆ ಜನರಿಗೆ ತಿಳಿಸಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.