ಬೆಂಗಳೂರು: ರಾಜ್ಯದಲ್ಲಿ 2021 – 22 ನೇ ಸಾಲಿನ ಡಿಪ್ಲೊಮಾ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ ದಾಖಲಾತಿಗೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಸೆ. 20 ರ ವರೆಗೆ ದಾಖಲಾತಿ ಕಾರ್ಯಗಳು ನಡೆಯಲಿವೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರವೇಶಾತಿಯನ್ನು ಸೆ. 20 ರ ವರೆಗೆ ಸಂಜೆ ಕಚೇರಿಯ ಅವಧಿಯ ವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಇದರ ಅನುಕೂಲವನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ರಾಜ ಯದ ಎಲ್ಲಾ ಪಾಲಿಟೆಕ್ನಿಕ್ಗಳ ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲಾತಿ ಅವಧಿಯನ್ನು ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸೆ. 20 ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.