ಬೆಂಗಳೂರು: ರಾಜ್ಯದ ಸರ್ಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೆಎಸ್ಆರ್ಟಿಸಿಯ 60 ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಚಿನ್ನದ ಪದಕ ಪ್ರದಾನಿಸಿ ಅವರು ಮಾತನಾಡಿದರು. ಸದ್ಯ ರಾಜ್ಯದ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು ಆರ್ಥಿಕ ಸಂಕಷ್ಟದಲ್ಲಿವೆ. ಈ ಸಮಸ್ಯೆ ಸರಿದೂಗಿಸಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಸಮಿತಿಯು ಸಾರಿಗೆ ನಿಗಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿವೆ. ಈ ವರದಿಯನ್ನು ಆಧರಿಸಿ ಮುಂದಿನ ಬಜೆಟ್ನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಎಲ್ಲಾ ಅವಧಿಯಲ್ಲಿಯೂ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದೆ ಎಂಬುದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತಗಳ ಸಂಭ್ರಮ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ @BSBommai ರವರು ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ನಾಲ್ಕು ಸಾರಿಗೆ ನಿಗಮಗಳಲ್ಲಿನ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು. (1/2) pic.twitter.com/9kR8FnPTtQ
— CM of Karnataka (@CMofKarnataka) September 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.