ಟೊಕಿಯೋ: ಜಪಾನ್ನ ಟೊಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ.
ಇದೇ ಮೊದಲ ಬಾರಿಗೆ ಪ್ಯಾರಾಲಿಂಪಿಕ್ಸ್ನಲ್ಲಿ ಆರ್ಚರಿ ವಿಭಾಗದಲ್ಲಿ ಪದಕ ಲಭಿಸಿದೆ. ಪುರುಷರ ವಿಭಾಗದ ಅರ್ಚರಿಯಲ್ಲಿ ಭಾರತೀಯ ಬಿಲ್ವಿದ್ಯಾ ಪಟು ಹರ್ವಿಂದರ್ ಸಿಂಗ್ ಕಂಚಿನ ಪದಕ ಗೆಲ್ಲುವ ಮೂಲಕ ದೇಶದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ಆ ಮೂಲಕ ಈ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಒಟ್ಟು 13 ಪದಕಗಳ ಹಿರಿಮೆಯನ್ನು ತನ್ನದಾಗಿಸಿಕೊಂಡಿದೆ.
ಇವರ ಈ ಸಾಧನೆಗೆ ಮೆಚ್ಚುಗೆ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಹರ್ವೀಂದರ್ ಸಿಂಗ್ ಅವರದ್ದು ಅಸಾಮಾನ್ಯ ಪ್ರತಿಭೆಯಾಗಿದೆ. ಈ ಪದಕ ಅವರ ಕೌಶಲ್ಯ ಮತ್ತು ಪರಿಶ್ರಮಕ್ಕೆ ಸಿಕ್ಕ ಫಲಿತಾಂಶವಾಗಿದೆ. ಕಂಚು ಗೆದ್ದ ಅರ್ಚರಿ ಪಟು ಹರ್ವಿಂದರ್ಗೆ ಅಭಿನಂದನೆಗಳು. ಅವರ ಬಗ್ಗೆ ನಮಗೆ ಹೆಮ್ಮೆಯಾಗುತ್ತದೆ. ಅವರ ಭವಿಷ್ಯಕ್ಕೆ ಶುಭಹಾರೈಕೆಗಳು ಎಂದು ಹೇಳಿದ್ದಾರೆ.
Outstanding performance by @ArcherHarvinder. He displayed great skill and determination, resulting in his medal victory. Congratulations to him for winning a historic Bronze medal. Proud of him. Wishing him the very best for the times ahead. #Paralympics #Praise4Para pic.twitter.com/qiwgMfitVz
— Narendra Modi (@narendramodi) September 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.