ನವದೆಹಲಿ: ಶಿಕ್ಷಕರ ದಿನಾಚರಣೆಯನ್ನು ಇಂದು ದೇಶವ್ಯಾಪಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕ ವರ್ಗವನ್ನು ಅಭಿನಂದಿಸಿದ್ದಾರೆ. ಅಲ್ಲದೇ ಕೋವಿಡ್ ಸಮಯದಲ್ಲಿ ಬೋಧನೆಯಲ್ಲಿ ಹೊಸತನವನ್ನು ತಂದ ಮತ್ತು ವಿದ್ಯಾರ್ಥಿಗಳ ಶಿಕ್ಷಣ ಪಯಣವನ್ನು ಖಾತ್ರಿಪಡಿಸಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಮಾಜಿ ರಾಷ್ಟ್ರಪತಿ ಎಸ್ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಹಾನ್ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸಿದರು.
“ಶಿಕ್ಷಕರ ದಿನದಂದು, ಇಡೀ ಬೋಧನಾ ವರ್ಗಕ್ಕೆ ಶುಭಾಶಯಗಳು, ಇವರು ಯುವ ಮನಸ್ಸುಗಳನ್ನು ಪೋಷಿಸುವಲ್ಲಿ ಸದಾ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
“ಕೋವಿಡ್ ಕಾಲದಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಪ್ರಯಾಣವನ್ನು ಶಿಕ್ಷಕರು ಖಾತ್ರಿಪಡಿಸಿದ್ದಾರೆ ಮತ್ತು ಬೋಧನೆಯಲ್ಲಿ ಹೊಸತನ್ನು ತಂದಿದ್ದಾರೆ ಎಂಬುದು ಶ್ಲಾಘನೀಯ” ಎಂದು ಅವರು ಹೇಳಿದ್ದಾರೆ.
On Teachers' Day, greetings to the entire teaching fraternity, which has always played a pivotal role in nurturing young minds. It is commendable how teachers have innovated and ensured the education journey of students continues in the COVID-19 times.
— Narendra Modi (@narendramodi) September 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.