ಬೆಂಗಳೂರು: ರಾಜ್ಯದ ಶಾಲೆಗಳ ಆವರಣದಲ್ಲಿ ಹಾದು ಹೋಗಿರುವ ಎಲ್ಲಾ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.
2019 ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯುತ್ ಶಾಕ್ಗೆ ತುತ್ತಾಗಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. 2021 ರ ಆಗಸ್ಟ್ 15 ರಂದು ತುಮಕೂರಿನ 16 ವರ್ಷದ ಬಾಲಕನೋರ್ವ ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿದ್ದ. ಈ ಸಂಬಂಧ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಿ, ಶಾಲಾವರಣದಲ್ಲಿರುವ ವಿದ್ಯುತ್ ತಂತಿಗಳನ್ನು ತೆರವು ಮಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.
ಹಾಗೆಯೇ 2021 ರ ಆ. 15 ರಂದು ಮೃತಪಟ್ಟ ಬಾಲಕನ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಒದಗಿಸುವಂತೆಯೂ ಕೋರ್ಟ್ ಸೂಚಿಸಿದೆ. ಮುಂದಿನ 30 ದಿನಗಳಲ್ಲಿ ಈ ಮೊತ್ತವನ್ನು ನೀಡುವಂತೆಯೂ ತಿಳಿಸಿದೆ. ಘಟನೆಯಲ್ಲಿ ಗಾಯಗೊಂಡವರಿಗೂ ಪರಿಹಾರ ಒದಗಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.