ನವದೆಹಲಿ: ಪ್ರತಿಭಟನೆ ನಿರತ ರೈತರನ್ನು ತಾಲಿಬಾನಿಗೆ ಹೋಲಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಈ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಗೌರವ್ ಭಾಟಿಯ ಅವರು, ರೈತರನ್ನು ಪ್ರಚೋದಿಸಲು ಮತ್ತು ವಿಭಜಿಸಲು ಹರಿಯಾಣ ಮತ್ತು ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ, ಕೇಂದ್ರ ಸರಕಾರ ಕೂಡಲೇ ರೈತ ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂಬ ಸುರ್ಜೆವಾಲಾ ಅವರ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ.
“ರೈತರ ಮತ್ತು ಹರಿಯಾಣದ ಹಿತದೃಷ್ಟಿಯಿಂದ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಹೇಳುವ ಹಕ್ಕು ರಂದೀಪ್ ಸುರ್ಜೇವಾಲ ಅವರಿಗೆ ಇಲ್ಲ. ಕಾಂಗ್ರೆಸ್ ರೈತರನ್ನು ತಾಲಿಬಾನಿಗೆ ಹೋಲಿಸಿದ್ದು ದುರಾದೃಷ್ಟ. ರೈತರು ದೇಶದ ಹೆಮ್ಮೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಇರುವ ಬಿಜೆಪಿ ಸರಕಾರ ರೈತರ ಉಜ್ವಲ ಭವಿಷ್ಯದ ದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಅವರನ್ನು ತಾಲಿಬಾನಿಗೆ ಹೋಲಿಸಿ ತನ್ನ ನಿಜವಾದ ಮುಖ ಬಯಲುಮಾಡಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.