ನವದೆಹಲಿ: ಸೆ. 15 ರಂದು ಪ್ರಧಾನಿ ಮೋದಿ ಅವರು ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸುವ ಮೂಲಕ ರಚಿಸಲಾದ ಸಂಸದ್ ಟಿವಿಗೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಸದ್ ಟಿವಿಯನ್ನು ಸೆರೆಬ್ರಲ್ ಚಾನೆಲ್ ಆಗಿ ಇರಿಸಲಾಗಿದ್ದು, ಇದು ದೇಶದ ಪ್ರಜಾಪ್ರಭುತ್ವ ನೀತಿಗಳು, ಸಂಸ್ಥೆಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೀಕ್ಷಕರಿಗೆ ಗುಣಮಟ್ಟದ ಕಾರ್ಯಕ್ರಮಗಳನ್ನು ನೀಡಲಿದೆ.
ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದ್ ಟಿವಿ ಎರಡು ಚಾನೆಲ್ಗಳ ಮೂಲಕ ಲೋಕಸಭಾ ಮತ್ತು ರಾಜ್ಯಸಭಾ ಕಲಾಪಗಳನ್ನು ಏಕಕಾಲಕ್ಕೆ ಪ್ರಸಾರ ಮಾಡಲಿವೆ.
ಸೆ. 15 ರಂದು ಇದನ್ನು ಪ್ರಧಾನಿ ಮೋದಿ ಅವರು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಔಪಚಾರಿಕವಾಗಿ ಆರಂಭಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.