ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿ ಕೂಚ್ ಬೆಹಾರ್ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಏಳು ಜನರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 3 ರಂದು ರಾಜಘೋರ ನದಿಗೆ ಅರ್ಜುನ್ ಮುಂಡಾ ಎಂಬುವವರನ್ನು ಕರೆದುಕೊಂಡು ಹೋಗಲಾಗಿತ್ತು, ಅಲ್ಲಿ ಆತ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದ ಎಂದು ಹೇಳಲಾಗಿದೆ. ಎಫ್ಐಆರ್ ಪ್ರಕಾರ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ.
ಹಿಂಸಾಚಾರದ ಸಂದರ್ಭದಲ್ಲಿ ವರದಿಯಾದ ತುಫಂಗಂಜ್ನಲ್ಲಿ ನಡೆದ ಮತ್ತೊಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ ನಾಲ್ವರನ್ನು ಬಂಧಿಸಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ವೇಳೆ ವರದಿಯಾದ ಕೊಲೆ ಮತ್ತು ಅತ್ಯಾಚಾರ ಘಟನೆಗಳ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ.
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ವಿಜಯದ ಉನ್ಮಾದದಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ನಡೆಸಿದ್ದರು. ಈ ವೇಳೆ ನಡೆದ ಹಿಂಸಾತ್ಮಕ ಘಟನೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತಲೆತಗ್ಗಿಸುವಂತೆ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.