ಬೆಂಗಳೂರು: ದೇಗುಲಗಳ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನಿಟ್ಟುಕೊಂಡು ಅವಸರವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸದಂತೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸದನದಲ್ಲಿ ಎಲ್ಲಾ ರೀತಿಯ ವಿವರಗಳನ್ನು ನೀಡಲಾಗುತ್ತದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾತಕ್ಕಾಗಿ ಕ್ರಮ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿ ಜಿಲ್ಲಾಧಿಕಾರಿಗಳು.ಮತ್ತು ತಹಶೀಲ್ದಾರರಿಗೂ ನೊಟೀಸ್ ನೀಡಲಾಗಿದೆ ಎಂದು ಹೇಳಿದ್ದಾರೆ.
ಇಡೀ ರಾಜ್ಯದಲ್ಲಿ ಅವಸರದ ತೀರ್ಮಾನಗಳನ್ನು ತೆಗೆದುಕೊಂಡು ದೇಗುಲಗಳನ್ನು ಒಡೆಯುವ ಕೆಲಸ ಮಾಡಬಾರದು. ಸುಪ್ರೀಂಕೋರ್ಟ್ನ ಆದೇಶವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎರಡು ದಿನಗಳಲ್ಲಿ ನಿರ್ಧಿಷ್ಟ ಸೂಚನೆ ನೀಡಲಾಗುತ್ತದೆ. ಸದನದಲ್ಲಿ ಈ ಬಗ್ಗೆ ಎಲ್ಲಾ ವಿವರಗಳನ್ನೂ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.