ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ನೀವು ಸಹಕಾರ ನೀಡಿದರೆ ಎರಡು ವರ್ಷದಲ್ಲಿ ದೆಹಲಿಯನ್ನು ಹೊಳೆಯುವಂತೆ ಮಾಡುವುದಾಗಿ ಪ್ರಧಾನಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.
‘ನಿಮ್ಮ ಸ್ವಚ್ಛ ಭಾರತ, ಸ್ಕಿಲ್ ಇಂಡಿಯಾ, ಡಿಜಿಟಲ್ ಇಂಡಿಯಾ ಕನಸನ್ನು ನಾವು ಸಾಕಾರಗೊಳಿಸುತ್ತೇವೆ. ನಾವು ಶ್ರಮಿಸುತ್ತೇವೆ, ಇದರಿಂದ ವಿದೇಶಕ್ಕೆ ಹೋದಾಗ ನಿಮಗೆ ಗೌರವವೂ ಸಿಗುತ್ತದೆ ಎಂದು ಪ್ರಧಾನಿಗೆ ತಿಳಿಸಿದ್ದೇನೆ’ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.
ಪರಸ್ಪರ ಸಹಕಾರದೊಂದಿಗೆ ಕೇಂದ್ರ ಮತ್ತು ರಾಜ್ಯ ಕಾರ್ಯನಿರ್ವಹಿಸಬೇಕು, ಇಲ್ಲಿ ರಾಜಕೀಯ ಬರಬಾರದು ಎಂಬ ಮಾತನ್ನು ಮೋದಿ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.
ದೆಹಲಿಯ ವಿದ್ಯುತ್ ಸಮಸ್ಯೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.