ನವದೆಹಲಿ: ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ರಾಷ್ಟ್ರಗಳ ಮುಖ್ಯಸ್ಥರ 21 ನೇ ಸಭೆಯ ಪ್ರಧಾನ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ಆಗಿ ಮಾತನಾಡಿದರು. ತಜಕಿಸ್ತಾನದ ದುಶಾನ್ಬೆಯಲ್ಲಿ ಇದು ನಡೆದಿದೆ.
“ಮಧ್ಯ ಏಷ್ಯಾದೊಂದಿಗಿನ ಸಂಪರ್ಕವನ್ನು ಹೆಚ್ಚಿಸಲು ಭಾರತ ಬದ್ಧವಾಗಿದೆ. ಭಾರತದ ವಿಶಾಲ ಮಾರುಕಟ್ಟೆಯೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಮಧ್ಯ ಏಷ್ಯಾದ ದೇಶಗಳು ಅಪಾರ ಲಾಭ ಪಡೆಯಬಹುದು ಎಂದು ನಾವು ನಂಬುತ್ತೇವೆ” ಎಂದು ಎಸ್ಸಿಒ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಶುಕ್ರವಾರ 71 ವರ್ಷ ತುಂಬಿದ್ದು, ಬಿಜೆಪಿ ಅವರು ಜನ್ಮದಿನವನ್ನು “ಸೇವಾ ಮತ್ತು ಸಮರ್ಪಣ” ಅಭಿಯಾನದ ಮೂಲಕ ಆಚರಿಸುತ್ತಿದೆ. ಇಂದಿನಿಂದ 20 ದಿನಗಳ ಮೆಗಾ ಸಾರ್ವಜನಿಕ ಸಂಪರ್ಕ ಅಭಿಯಾನ ನಡೆಯಲಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿರ್ಮಲಾ ಸೀತಾರಾಮನ್, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರಿಗೆಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 45 ನೇ ಜಿಎಸ್ಟಿ ಕೌನ್ಸಿಲ್ ಸಭೆಯನ್ನು ಲಕ್ನೋದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.