ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಈ ಕುರಿತು ಪ್ರಶ್ನೋತ್ತರ ನಡೆದ ಸಂದರ್ಭದಲ್ಲಿ ಗೃಹ ಸಚಿವರು ಮಾತನಾಡಿ, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು, ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.
ಜನತೆಯ ಮುಗ್ಧತೆ, ಅಥವಾ ಇನ್ನಿತರ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ, ಸಮಾಜದಲ್ಲಿ, ಶಾಂತಿ ಕದಡುವ ಸಂಭವವೂ ಇದೆ, ಈ ಕುರಿತು ರಾಜ್ಯ ಸರಕಾರ ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಸದನಕ್ಕೆ ತಿಳಿಸಿದರು.
ಆಮಿಷ ನೀಡಿ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದ್ದು ಅದನ್ನು ಯಾವ ರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು. ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಸಂಘಟನೆಗಳ ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಸದನದಲ್ಲಿ ಸದಸ್ಯರು ಉತ್ತರಪ್ರದೇಶದಂತೆ ರಾಜ್ಯದಲ್ಲೂ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.