ಬೆಂಗಳೂರು: ವಿಕಾಸಸೌಧದಲ್ಲಿ ವಿಶ್ವ ಪರಂಪರಿಕ ಪ್ರವಾಸಿ ತಾಣವಾದ ಹಂಪಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಆನಂದ್ ಸಿಂಗ್ ನಡೆಸಿದರು.
ಸಭೆಯಲ್ಲಿ ಹಂಪಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವುದಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ಹಂಪಿಯಲ್ಲಿ ಚಲನಚಿತ್ರ ಚಿತ್ರೀಕರಣಕ್ಕಾಗಿ ಅವಕಾಶ ನೀಡುವ ಕುರಿತು ನಿಯಮಗಳನ್ನು ಸರಳಿಕರಣ ಮಾಡಿದರೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತೆ ಆಗುತ್ತದೆ. ಈ ಸಂಬಂಧ ಚಲನಚಿತ್ರ ನಿರ್ದೇಶಕರನ್ನು ಸೇರಿಸಿ ಸಭೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.
ಹಾಗೆಯೇ ಹಂಪಿಯ 5 ಕಡೆ ಶೌಚಾಲಯವನ್ನು ಉನ್ನತಿಕರಣ ಮಾಡವುದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಹಂಪಿ ನೋಡಲು ಆಗಮಿಸುವ ಪ್ರವಾಸಿಗರಿಗೆ ಆನ್ ಲೈನ್ ಟಿಕೆಟ್ ಜೊತೆಗೆ ಮ್ಯಾನ್ಯುಯಲ್ ಟಿಕೆಟ್ ಸಹ ದೊರೆಯಬೇಕು, ನೆಟ್ವರ್ಕ್ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾಡಲು 3 ಟವರ್ ಸ್ಥಾಪನೆಗೆ ಅನುಮತಿ ನೀಡಲಾಗುತ್ತದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.