ಶ್ರೀನಗರ: ಭಾರತದ ವಿರುದ್ಧ ಕಾಶ್ಮೀರ ಯುವಕರನ್ನು ಎತ್ತಿಕಟ್ಟಲು ಶತಪ್ರಯತ್ನ ನಡೆಸುತ್ತಿರುವ ಉಗ್ರ ಸಂಘಟನೆಗಳು ಅದಕ್ಕಾಗಿ ನಾನಾ ಮಾರ್ಗಗಳನ್ನು ಅನುಸರಿಸುತ್ತಿವೆ. ಇದೀಗ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ವಿಡಿಯೋವೊಂದನ್ನು ಬಿಡುಗಡೆ ಮಾಡಿ, ಭಾರತೀಯ ಸೇನೆಯ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಯುವಕರಿಗೆ ಕರೆ ನೀಡಿದ್ದಾರೆ.
ತಮ್ಮ ಜಿಹಾದಿ ಸಂದೇಶಗಳನ್ನು ಪಸರಿಸಲು ಉಗ್ರರು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದಾರೆ. ಇದೀಗ ಭಾರತದ ಸೇನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ಭಾಗವಹಿಸುವಂತೆ ಕಾಶ್ಮೀರ ಯುವಕರಿಗೆ ಕರೆ ನೀಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇಂತಹ ವಿಡಿಯೋ ಇದೇ ಮೊದಲ ಬಾರಿಗೆ ಕಾಶ್ಮೀರ ಕಣಿವೆಯಲ್ಲಿ ಹರಿದಾಡುತ್ತಿದೆ.
ಹಿಜ್ಬುಲ್, ಲಷ್ಕರ್ ಸೇರಿದಂತೆ ಅನೇಕ ಸಂಘಟನೆಗಳ ಸುಮಾರು ೩೦೦ ಉಗ್ರರು ಭಾರತದೊಳಕ್ಕೆ ನುಗ್ಗಲು ಸಂಚು ನಡೆಸುತ್ತಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಈ ವಿಡಿಯೋ ಹೊರಬಂದಿದೆ. ಈ ಬಗ್ಗೆ ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.