ಬೆಂಗಳೂರು: ರಾಜ್ಯದಲ್ಲಿ ಮಾಲಿನ್ಯ ಪ್ರಮಾಣ ಇಳಿಕೆ ಮಾಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಯು 125 ಕೆವಿಎ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಡಿಸೇಲ್ ಜನರೇಟರ್ ಸೆಟ್ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ ಕಡ್ಡಾಯಗೊಳಿಸಿ ಆದೇಶಿಸಿದೆ.
ದೇಶದ ವಿವಿಧ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮಟ್ಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಎಲ್ಲಾ ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಕೆಎಸ್ಪಿಸಿಬಿಯು ಎಲ್ಲಾ ಅಪಾರ್ಟ್ಮೆಂಟ್ಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು, ಯೋಜನಾ ತಾಣಗಳು, ವಿಮಾನ ನಿಲ್ದಾಣಗಳು, ರೈಲು, ಬಸ್ ಸೇರಿದಂತೆ ಇತರ ಸ್ಥಳಗಳಲ್ಲಿ ಬಳಕೆ ಮಾಡುತ್ತಿರುವ ಡಿಜೆ ಸೆಟ್ಗಳಿಗೆ ಕಡ್ಡಾಯವಾಗಿ ನಿಯಂತ್ರಣ ಸಾಧನ ಅಳವಡಿಸಲು ಸೂಚಿಸಿದೆ. ಹೊಗೆ ಹೊರಸೂಸುವಿಕೆ ನಿಯಂತ್ರಣ ಸಾಧನವು ಮಂಡಳಿಯ ಪ್ಯಾರಾಮೀಟರ್ಗಳನ್ನು ಪೂರೈಸಬೇಕು. ಕಣಗಳ ವಸ್ತುಗಳನ್ನು ಪರೀಕ್ಷಿಸಬೇಕು, ಸಾಧನದ ಇಂಧನ ದಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.