ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಘೋಷಣೆಯಾಗಿದೆ.
ರಾಷ್ಟ್ರೀಯ ಚುನಾವಣಾ ಆಯೋಗವು ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ನಿಗದಿಗೊಳಿಸಿ ಆದೇಶಿಸಿದೆ. ಅಕ್ಟೋಬರ್ 30 ರಂದು ಈ ಎರಡೂ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 8 ಕೊನೆಯ ದಿನ. ಅಕ್ಟೋಬರ್ 11 ರಂದು ನಾಮಪತ್ರ ಪರಿಶೀಲನೆ, ಅ. 13 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.