ಮಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಕಾರ್ಯ ಯೋಜನೆ ರೂಪಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸರ್ಕಾರಿ ಗೋ ಶಾಲೆ ಕಡಬ ತಾಲೂಕಿನ ರಾಮಕುಂಜದಲ್ಲಿ ಅನುಷ್ಠಾನವಾಗಲಿದೆ ಎಂದು ಸಚಿವ ಅಂಗಾರ ಅವರು ಹೇಳಿದ್ದಾರೆ.
ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿರುವ ಅವರು, ಶೀಘ್ರದಲ್ಲೇ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು. ರಾಮಕುಂಜದಲ್ಲಿ ಸರ್ಕಾರ 98 ಎಕರೆ ಪ್ರದೇಶದಲ್ಲಿ ಗೋ ಶಾಲೆ ನಿರ್ಮಾಣ ಮಾಡಲು ಸ್ಥಳ ಗುರುತು ಮಾಡಿದೆ. ಇಲ್ಲಿ ಮುಂದಿನ ದಿನಗಳಲ್ಲಿ ಶಾಶ್ವತ ಗೋಶಾಲೆ ನಿರ್ಮಾಣವಾಗಲಿದೆ. ಜೊತೆಗೆ ಅಕ್ರಮ ಗೋ ಸಾಗಾಟದ ಸಂದರ್ಭದಲ್ಲಿ ಪತ್ತೆಹಚ್ಚಿದ ಗೋವುಗಳನ್ನು ಸಾಕುವುದಕ್ಕೂ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಈ ಗೋ ಶಾಲೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ 24 ಲಕ್ಷ ರೂ. ಅನುದಾನ ಒದಗಿಸಿದೆ. ಬೇಕಾದಲ್ಲಿ ಹೆಚ್ಚುವರಿ ಅನುದಾನ ಒದಗಿಸುವುದಕ್ಕೂ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಇಲ್ಲಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.