ನವದೆಹಲಿ: ಕೊರೋನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಕರ್ನಾಟಕಕ್ಕೆ ‘ ಕೊರೋನಾ ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಎಂಬ ಪ್ರಶಸ್ತಿ ದೊರೆತಿದೆ.
ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿ ಗೌರವಿಸಿದೆ.
ನಿನ್ನೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು.
ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಹಲವು ಉಪಕ್ರಮಗಳನ್ನು ತೆಗೆದುಕೊಂಡು, ಸೋಂಕನ್ನು ಸಮರ್ಥವಾಗಿ ನಿಯಂತ್ರಣ ಮಾಡುವಲ್ಲಿ ಕರ್ನಾಟಕ ಸಫಲವಾಗಿದ್ದು, ಈ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ರಾಜ್ಯಕ್ಕೆ ದೊರೆತಿದೆ. ಕಳೆದ ಒಂದೂವರೆ ವರ್ಷದಿಂದ ಕೊರೋನಾ ವಿರುದ್ಧ ಹೋರಾಡುತ್ತಿರುವ ರಾಜ್ಯ ಸರ್ಕಾರದ ಶ್ರಮಕ್ಕೆ ಈ ಪ್ರಶಸ್ತಿ ಲಭಿಸಿದೆ.
ಕೊರೊನಾ ನಿರ್ವಹಣೆಯಲ್ಲಿ ಕರ್ನಾಟಕ ಅತ್ಯುತ್ತಮ ರಾಜ್ಯ ಎಂದು ಗುರುತಿಸಿ ಇಂಡಿಯಾ ಟುಡೆ ಸಂಸ್ಥೆ ನೀಡಿರುವ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ.
ಕಳೆದ ಒಂದೂವರೆ ವರ್ಷದಿಂದ ರಾಜ್ಯದ ಜನತೆಯ ಆರೋಗ್ಯ, ಸುರಕ್ಷತೆಗಾಗಿ ಅವಿರತ ಸೇವೆ ಸಲ್ಲಿಸುತ್ತಿರುವ ಎಲ್ಲ ಕೊರೊನಾ ಯೋಧರಿಗೆ ಈ ಗೌರವ ಸಲ್ಲುತ್ತದೆ.#HealthGiriAwards21 pic.twitter.com/ia3pae84hc
— Dr Sudhakar K (@mla_sudhakar) October 2, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.