ಬೆಂಗಳೂರು: ಜನಪ್ರತಿನಿಧಿಗಳು ಹವಾನಿಯಂತ್ರಿತ ಕೊಠಡಿಯೊಳಗೆ ಕುಳಿತು ನಕ್ಷೆ ನೋಡಿಕೊಂಡು ಜನರ ಸಮಸ್ಯೆ ಬಗೆಹರಿಸುತ್ತಾರೆ ಎನ್ನುವುದು ಅಸಾಧ್ಯವಾದ ವಿಚಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನ ಹಳ್ಳಿ ಬಳಿ ನಿರ್ಮಿಸಲಾದ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಗೋಪೂಜೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿ ಮಾತನಾಡಿದರು.
ಇನ್ನು ಬೆಂಗಳೂರಿನಲ್ಲಿ ಹಳೆಯ ಕಟ್ಟಡಗಳು ಬಿದ್ದು ಆಗಿರುವ ಅನಾಹುತಗಳ ಬಗ್ಗೆ ಮಾತನಾಡಿದ ಅವರು, ಮಳೆ ಅನಾಹುತ ಸೇರಿದಂತೆ ಇನ್ನಿತರ ಅನಾಹುತಗಳ ಬಗ್ಗೆ ಅಧಿಕಾರಿಗಳ ಮೂಲಕ ಮಾಹಿತಿ ಪಡೆಯಲಾಗಿದೆ. ಜನರ ಸಮಸ್ಯೆಗಳನ್ನು ಅರಿತುಕೊಂಡು ಅವರಿಗೆ ಸರಿಯಾದ ಪರಿಹಾರವನ್ನು ಒದಗಿಸಿಕೊಡುವ ನಿಟ್ಟಿನಲ್ಲಿಯೂ ಸರ್ಕಾರ ಕಾಳಜಿ ವಹಿಸಲಿದೆ ಎಂದು ತಿಳಿಸಿದ್ದಾರೆ. ಯೋಜನಾಬದ್ಧ ಬೆಂಗಳೂರನ್ನು ನಾವು ನಿರ್ಮಾಣ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವನಗರ ಬಳಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಮುಖ್ಯಮಂತ್ರಿ @BSBommai ಅವರು ಇಂದು ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಗೋಪೂಜೆ ನೆರವೇರಿಸಿದರು. (1/2) pic.twitter.com/HXpVEr44xS
— CM of Karnataka (@CMofKarnataka) October 4, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.