ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಜಿಟಲ್ ಸಿಎಂ ಡ್ಯಾಷ್ಬೋರ್ಡ್ಗೆ ಚಾಲನೆ ನೀಡಿದ್ದಾರೆ.
ಸರ್ಕಾರದ ಹಲವು ಇಲಾಖೆಗಳ ಯೋಜನೆಗಳ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಟ್ಟಿನಲ್ಲಿ, ಪ್ರಧಾನಿ ಕಚೇರಿಯಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ವ್ಯವಸ್ಥೆಗಳ ಮಾದರಿಯಲ್ಲಿ ಈ ಡ್ಯಾಷ್ಬೋರ್ಡ್ ರಚನೆ ಮಾಡಲಾಗಿದೆ.
ಕಾಲಕಾಲಕ್ಕೆ ಸರ್ಕಾರದ ಯೋಜನೆಗಳನ್ನು ಪರಾಮರ್ಶೆ ಮಾಡಲು ಈ ಡ್ಯಾಷ್ಬೋರ್ಡ್ ಮುಖ್ಯಮಂತ್ರಿಗಳಿಗೆ ಸಹಾಯ ಮಾಡಲಿದೆ. ಈ ವ್ಯವಸ್ಥೆ ಈಗಾಗಲೇ ಗುಜರಾತ್, ಮಧ್ಯಪ್ರದೇಶ ಮೊದಲಾದ ರಾಜ್ಯಗಳಲ್ಲಿ ಜಾರಿಯಲ್ಲಿದೆ. ಈ ಡ್ಯಾಷ್ಬೋರ್ಡ್ಗೆ ನಿಖರವಾದ ಅಂಕಿಅಂಶಗಳನ್ನು ಕ್ಲಪ್ತ ಸಮಯಕ್ಕೆ ಅಪ್ಲೋಡ್ ಮಾಡುವಂತೆಯೂ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಪ್ರಧಾನಿ ಕಚೇರಿ ಮಾದರಿಯಲ್ಲಿ ಮುಖ್ಯಮಂತ್ರಿಗಳಿಗೆ ಡಿಜಿಟಲ್ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಮಾಹಿತಿ ನೀಡುವ ಸಿಎಂ ಡ್ಯಾಷ್ ಬೋರ್ಡ್ ಗೆ ಮುಖ್ಯಮಂತ್ರಿ @BSBommai ಇಂದು ಚಾಲನೆ ನೀಡಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರಗತಿಯಲ್ಲಿ ಇರುವ ಯೋಜನೆಗಳ ಸ್ಥಿತಿಗತಿ ಕುರಿತು ಡ್ಯಾಶ್ ಬೋರ್ಡ್ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ. (1/2) pic.twitter.com/QKQLmkWMEx
— CM of Karnataka (@CMofKarnataka) October 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.