ನವದೆಹಲಿ: ನಕ್ಸಲರಿಂದ ತತ್ತರಿಸಿ ಹೋಗಿರುವ ಪ್ರದೇಶಗಳಲ್ಲಿ ಮೊಬೈಲ್ ಸರ್ವಿಸ್ ನೆಟ್ವರ್ಕ್ಗಳನ್ನು, ಪೋಸ್ಟಲ್ ಸೇವೆಗಳನ್ನು ಅಭಿವೃದ್ಧಿಪಡಿಸುವ ಮಹತ್ವದ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ.
ಪ್ರಗತಿ(PRAGATI=Pro-Active Governance And Timely Implementation) ಸಭೆಯ ನೇತೃತ್ವ ವಹಿಸಿದ್ದ ಮೋದಿ, ನಕ್ಸಲ್ ಪೀಡಿತ ಪ್ರದೇಶದಲ್ಲಿ ಮೊಬೈಲ್ ಸೇವೆ ಅಭಿವೃದ್ಧಿಪಡಿಸುವ ಯೋಜನೆಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಈ ಭಾಗದ ಜನರಿಗೆ ಡೆಲಿವರಿಗಳು ಶೀಘ್ರಗತಿಯಲ್ಲಿ ಸಿಗುವಂತೆ ನೋಡಿಕೊಳ್ಳಬೇಕು ಎಂದು ಪೋಸ್ಟಲ್ ಇಲಾಖೆಗೆ ಸೂಚಿಸಿದ್ದಾರೆ.
ಸಾಮಾನ್ಯ ಮನುಷ್ಯನಿಗೆ ಅದರಲ್ಲೂ ಮುಖ್ಯವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುತ್ತಿರುವವ ಪ್ರತಿಯೊಬ್ಬರಿಗೂ ಮೊಬೈಲ್ ಸಂಪರ್ಕ ಅತ್ಯಗತ್ಯವಾಗಿದೆ. ಹೀಗಾಗಿ ಎಲ್ಲಾ ರಾಜ್ಯಗಳು ಮೊಬೈಲ್ ಸೇವೆ ಒದಗಿಸುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಮೋದಿ ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.