ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ ಪೂರಕ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ಕೊರೋನಾ ನಡುವೆಯೇ ಎರಡು ದಿನಗಳ ಕಾಲ ಪರೀಕ್ಷೆ ನಡೆಸಲಾಗಿದ್ದು, ಸೆ. 27 ಮತ್ತು 29 ರಂದು ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಗೆ ಒಟ್ಟು 59,155 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಪರೀಕ್ಷೆ ಬರೆದ 17,973 ಬಾಲಕಿಯರ ಪೈಕಿ 10,290 ಮಂದಿ ಉತ್ತೀರ್ಣರಾಗಿದ್ದಾರೆ. 35,182 ಬಾಲಕರು ಪರೀಕ್ಷೆ ಬರೆದಿದ್ದು, 19,232 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಈ ಬಾರಿ 3,232 ಸರ್ಕಾರಿ ಶಾಲೆಗಳ 27,313 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 15,855 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.