ಬೆಂಗಳೂರು: ಸರ್ಕಾರ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವವರಿಗೆ ಪ್ರೋತ್ಸಾಹ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ ಆಯೋಜಿಸಿದ್ದ ‘ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೈಗಾರಿಕಾ ನೀತಿಯ ಜೊತೆಗೆ, ಉದ್ಯೋಗ ನೀತಿ ಸಹ ಜಾರಿಗೊಳಿಸಲಾಗುವುದು. ದೇಶದಲ್ಲಿರುವ ಅತೀ ಹೆಚ್ಚು ನವೋದ್ಯಮಗಳ ಪೈಕಿ ಹೆಚ್ಚಿನವು ಬೆಂಗಳೂರಿನಲ್ಲೇ ಇವೆ. ರಾಜ್ಯದಲ್ಲಿ ಹೂಡಿಕೆ ಸ್ನೇಹಿ ವಾತಾವರಣ ಇದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ, ಡಾ. ಅಶ್ವತ್ಥ್ ನಾರಾಯಣ್ ಸೇರಿದಂತೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿರುವ "ಉದ್ಯಮಿಯಾಗು – ಉದ್ಯೋಗ ನೀಡು" ಕಾರ್ಯಕ್ರಮವನ್ನು ಮುಖ್ಯಮಂತ್ರಿ @BSBommai ಅವರು ಇಂದು ಉದ್ಘಾಟಿಸಿದರು.
ಮಾಜಿ ಮುಖ್ಯಮಂತ್ರಿ @BSYBJP, ಸಚಿವರಾದ @NiraniMurugesh, @drashwathcn, @MtbNagaraju, @STSomashekarMLA ಮತ್ತಿತರರು ಉಪಸ್ಥಿತರಿದ್ದರು. pic.twitter.com/vA8991m7sK
— CM of Karnataka (@CMofKarnataka) October 11, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.