ಬೆಂಗಳೂರು: ರಾಜ್ಯದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನದ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.
ಇಂದು ಎರಡೂ ಇಲಾಖೆಗಳಿಗೆ ಸಂಬಂಧಿಸಿದಂತಹ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಅವರು, ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ 55 ಕೋಟಿ ಪ್ರೋತ್ಸಾಹ ಧನ ನೀಡಬೇಕಿದೆ. ಅದನ್ನು ಶೀಘ್ರ ಬಿಡುಗಡೆ ಮಾಡುವಂತೆ ಆದೇಶಿಸಿರುವುದಾಗಿ ಅವರು ಹೇಳಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ 13000 ವಿದ್ಯಾರ್ಥಿಗಳು ವಿವಿಧ ಕೋರ್ಸ್ಗಳಿಗೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆದಿದ್ದು, ತಮಗೂ ವಿದ್ಯಾರ್ಥಿ ವೇತನ ಒದಗಿಸುವಂತೆ ತಿಳಿಸಿದ್ದರು. ಮಾನವೀಯ ಆಧಾರದ ಮೇಲೆ ಈ ಬೇಡಿಕೆಯನ್ನು ಒಪ್ಪಿಕೊಂಡಿದ್ದು, ಹಣ ಬಿಡುಗಡೆಗೆ ಆದೇಶಿಸಿರುವುದಾಗಿ ಅವರು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ 1.90 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ ಬಾಕಿ ಇದ್ದು, ವಾರದೊಳಗಾಗಿ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.