ನವದೆಹಲಿ: 1000 MWh ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ (BESS) ಅನ್ನು ಪ್ರಾಯೋಗಿಕ ಯೋಜನೆಯಾಗಿ ಸ್ಥಾಪಿಸಲು ಸರ್ಕಾರವು ಅನುಮತಿ ನೀಡಿದೆ.
ಈ ಯೋಜನೆಯು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ವಿದ್ಯುತ್ ಸಚಿವಾಲಯದ ಜಂಟಿ ಪ್ರಯತ್ನವಾಗಿದೆ. ದೇಶದಲ್ಲಿ ಇಂಧನ ಶೇಖರಣಾ ವ್ಯವಸ್ಥೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಇವು ಕಾರ್ಯಪ್ರವೃತ್ತವಾಗಿವೆ.
2030 ರ ವೇಳೆಗೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ 450 GW ನವೀಕರಿಸಬಹುದಾದ ಇಂಧನ ಗುರಿಯನ್ನು ಸಾಧಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಬೆಂಬಲಿಸಲು, ಇಂಧನ ಶೇಖರಣಾ ವ್ಯವಸ್ಥೆಗಳನ್ನು ಸ್ಥಾಪಿಪನೆಗೆ (ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ, ಹೈಡ್ರೋ ಪಂಪ್ ಶೇಖರಣಾ ಘಟಕಗಳು ಇತ್ಯಾದಿ) ಬೆಂಬಲ ಅಗತ್ಯವಾಗಿದೆ.
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಅಡಿಯಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾದ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್ಇಸಿಐ) 1000 ಮೆಗಾವ್ಯಾಟ್ ಬ್ಯಾಟರಿ ಎನರ್ಜಿ ಸ್ಟೋರೀಸ್ ಸಿಸ್ಟಮ್ ಖರೀದಿಗೆ ಆಸಕ್ತಿಯನ್ನು ವ್ಯಕ್ತಪಡಿಸುವಂತೆ ಕರೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.