ಮಂಗಳೂರು: ಬೈಕಂಪಾಡಿ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು. ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಹಿರಿಯ ಪೊಲೀಸ್ ಆಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಒಂದು ನಾಗನ ಮೂರ್ತಿಯನ್ನು ಭಗ್ನ ಮಾಡಿ, ನಂದಿಯ ಕಲ್ಲಿನ ವಿಗ್ರಹವನ್ನು ಸಹ ಒಡೆದು ಹಾನಿಮಾಡಿದ್ದಾರೆ. ಕಪಾಟು ಒಡೆದು ಹಾಕಿದ್ದರೂ ಹಣವನ್ನು, ಹುಂಡಿಯ ಎದುರಿನಲ್ಲಿದ್ದ ಹಣವನ್ನು ಕೊಂಡು ಹೋಗಿಲ್ಲ ಹೀಗಾಗಿ ಇದೊಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಷಡ್ಯಂತ್ರವಾಗಿದೆ. ಈ ಬಗ್ಗೆ ಪಣಂಬೂರು ಎಸಿಪಿ ಮಹೇಶ್ ಕುಮಾರ್ ಅವರಲ್ಲಿ ಶಾಸಕರು ಮಾತನಾಡಿ ಅಪರಾಧಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಿಂದೂಗಳ ಭಾವನೆಗಳನ್ನು ಕೆರಳಿಸುವ ಕೃತ್ಯಗಳನ್ನು ಯಾರೂ ಮಾಡಬಾರದು. ತಾಳ್ಮೆಗೂ ಮಿತಿಯಿರುತ್ತದೆ. ಒಳ್ಳೆಯ ಮಾತಿನಲ್ಲಿ ಅರ್ಥ ಮಾಡಿಕೊಳ್ಳದೇ ಹೋದಲ್ಲಿ ದಂಡ ಪ್ರಯೋಗ ಮಾಡಿಯಾದರೂ ಬುದ್ದಿ ಕಲಿಸಬೇಕಾಗುತ್ತದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.