ನವದೆಹಲಿ: ಭಾರತದ ರಿಯಲ್ ಎಸ್ಟೇಟ್ ಕ್ಷೇತ್ರವು 2030ರ ವೇಳೆಗೆ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಗಾತ್ರವನ್ನು ತಲುಪುವ ನಿರೀಕ್ಷೆಯಿದೆ ಮತ್ತು ದೇಶದ ಜಿಡಿಪಿಯ 18-20%ರಷ್ಟು ಕೊಡುಗೆ ನೀಡಲಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.
ಭಾರತೀಯ ಕೈಗಾರಿಕಾ ಒಕ್ಕೂಟದ 13 ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಸತಿ ಮಾರಾಟವು ಚೇತರಿಸಿಕೊಳ್ಳುತ್ತಿದೆ. 100 ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಸ್ಮಾರ್ಟ್ ಸಿಟಿ ಯೋಜನೆ ರಿಯಲ್ ಎಸ್ಟೇಟ್ ಕಂಪನಿಗಳಿಗೆ ಒಂದು ಉತ್ತಮ ಅವಕಾಶವಾಗಿದೆ ಎಂದು ಅವರು ಹೇಳಿದರು.
ರಿಯಲ್ ಎಸ್ಟೇಟ್ ವಲಯ ಮತ್ತು ಅದರ ಪಾಲುದಾರರು ಸರ್ಕಾರವು ಕೈಗೊಂಡ ‘ಎಲ್ಲರಿಗೂ ವಸತಿ’ ಉಪಕ್ರಮವನ್ನು ಬೆಂಬಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದಿದ್ದಾರೆ.
ಕಳೆದ 18 ತಿಂಗಳುಗಳು ಸವಾಲಾಗಿದೆ ಎಂದು ಒಪ್ಪಿಕೊಂಡ ಕಾಂತ್, ಆತ್ಮನಿರ್ಭರ ಭಾರತ ಪ್ಯಾಕೇಜ್ 3.0 ರಿಯಲ್ ಎಸ್ಟೇಟ್ ಡೆವಲಪರ್ಗಳು ಮತ್ತು ಮನೆ ಖರೀದಿದಾರರಿಗೆ ತೆರಿಗೆ ಪರಿಹಾರವನ್ನು ನೀಡುತ್ತದೆ ಮತ್ತು 35,000 ಕೋಟಿ ರೂಪಾಯಿ ಕಾರ್ಪಸ್ ಹೂಡಿಕೆಯೊಂದಿಗೆ ಕೈಗೆಟುಕುವ ವಸತಿ ನಿಧಿ ಮತ್ತು ರಾಷ್ಟ್ರೀಯ ವಸತಿ ಬ್ಯಾಂಕ್ ಸ್ಥಾಪನೆ ಮುಂಬರುವ ತಿಂಗಳುಗಳಲ್ಲಿ ವಲಯವನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆಯಿದೆ. ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ಅನುಮೋದಿಸಿದ ರಿಯಲ್ ಎಸ್ಟೇಟ್ ಇನ್ವೆಸ್ಟ್ಮೆಂಟ್ ಟ್ರಸ್ಟ್ ಪ್ಲಾಟ್ಫಾರ್ಮ್ ಮುಂಬರುವ ವರ್ಷಗಳಲ್ಲಿ 1.25 ಲಕ್ಷ ಕೋಟಿ ರೂಪಾಯಿಗಳ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.