
ನವದೆಹಲಿ: ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಇಂದು ಪ್ರದಾನಿಸಲಾಯಿತು.
67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರಧಾನಿಸಿದರು.
70 ವರ್ಷದ ರಜನೀಕಾಂತ್ ಭಾರತೀಯ ಚಲನಚಿತ್ರ ಜಗತ್ತಿಗೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದರು.
ನಟಿ ಕಂಗನಾ ರಣಾವತ್ ಅವರು ತಮ್ಮ ‘ಮಣಿಕರ್ಣಿಕಾ’ ಮತ್ತು ‘ಪಂಗಾ’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ನಟರಾದ ಧನುಷ್ ಮತ್ತು ಮನೋಜ್ ಬಾಜಪೇಯಿ ಅವರು ಕ್ರಮವಾಗಿ ‘ಅಸುರನ್’ ಮತ್ತು ‘ಭೋಂಸ್ಲೆ’ ಸಿನಿಮಾಗಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು.
ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ಯುದ್ಧ ಮಹಾಕಾವ್ಯ ಮರಕ್ಕರ್: ಲಯನ್ ಆಫ್ ದಿ ಅರೇಬಿಯನ್ ಸೀ ಅತ್ಯುತ್ತಮ ಫೀಚರ್ ಫಿಲ್ಮ್ ಪ್ರಶಸ್ತಿ ಗೆದ್ದಿದೆ.
ಹರೀಶ್ ಕಲ್ಯಾಣ್ ಅವರ ಜೆರ್ಸಿ ತೆಲುಗು ಭಾಷೆಯಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದರೆ, ರಬ್ ದಾ ರೇಡಿಯೋ 2 ಪಂಜಾಬಿ ಭಾಷೆಯ ಅತ್ಯುತ್ತಮ ಚಲನಚಿತ್ರವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


