ನವದೆಹಲಿ: ಉಜ್ಬೇಕಿಸ್ಥಾನದ ಅಧ್ಯಕ್ಷರಾಗಿ ಶವಕತ್ ಮಿರ್ಜಿಯೋವ್ ಅವರು ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಈ ಚುನಾವಣಾ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಶವಕತ್ ಅವರ ಎರಡನೇ ಅವಧಿಯಲ್ಲಿ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಧ್ಯ ಏಷ್ಯಾ ರಾಷ್ಟ್ರವಾದ ಉಜ್ಬೇಕಿಸ್ತಾನದ ಪ್ರಸ್ತುತ ನಾಯಕ ಚುನಾವಣೆಯಲ್ಲಿ ಎರಡನೇ ಬಾರಿಗೆ ಐದು ವರ್ಷಗಳ ಅವಧಿಗೆ ಗೆದ್ದಿದ್ದಾರೆ ಎಂದು ಪ್ರಾಥಮಿಕ ಫಲಿತಾಂಶಗಳು ಸೋಮವಾರ ತಿಳಿಸಿವೆ.
ಶವಕತ್ ಮಿರ್ಜಿಯೋವ್ ಅವರು ಭಾನುವಾರದ ಮತ ಎಣಿಕೆಯಲ್ಲಿ ಶೇಕಡಾ 80.1 ರಷ್ಟು ಮತಗಳನ್ನು ಪಡೆದರು ಎಂದು ದೇಶದ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.